ವಚನ - 520     
 
ಅಡಿಗಡಿಗೆ ತೊಳೆದು ಕುಡಿದಡೆ ಹೊಟ್ಟೆಯ ಜಲಗರಕುತ್ತ ಬೆಳೆಯಿತ್ತೆ? ಅಚ್ಚ ಪ್ರಸಾದಿಯಾದಡೆ ಹಿಂದೆ ಪರಿಯಾಣ ಉಳಿವುದೆ? ಇವರೆಲ್ಲರು ನಿಮ್ಮ ಪೂಜಿಸಿ ವ್ರತಗೇಡಿಗಳಾದರು. ನಾ ನಿಮ್ಮ ಪೂಜಿಸಿ ಬದುಕಿದೆನು ಗುಹೇಶ್ವರಾ!