Index   ವಚನ - 81    Search  
 
ಕಾಮಧೇನುವಿನ ನಡುವೆ ಒಂದು ಕೋಣ ಕಟ್ಟಿ ಇದ್ದಿತ್ತು. ಕೋಣನ ಗವಲು ತಾಗಿ ಕಾಮಧೇನು ಕೆಡುತ್ತದೆ. ಕೋಣನ ಡೋಣಿಗೆ ತಳ್ಳಿ ಕಾಮಧೇನುವ ಕಾಣದಂತೆ ಮಾಡು. ಅರಿವು ಅಜ್ಞಾನವ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.