Index   ವಚನ - 94    Search  
 
ಗೋವು ಮೊದಲು ಚತುಷ್ಟಾದಿ ಜೀವಂಗಳು ತಾವು ಬಂದ ಹಾದಿಯ ಮೂಸಿ ನೋಡಿ ತಮ್ಮಯ ಬೀಡಿಂಗೆ ಹೋಹಂತೆ, ಆ ಪರಿ ನಿನಗಿಲ್ಲ, ಪಶುವಿನ ಮತಿಯಷ್ಟು ಗತಿಯಿಲ್ಲ. ಬಂದುದ ಮರೆದ ಬಂಧ ಜೀವಿಗ ನಾನಾಗಿ ಜೀವಕಾಯದ ಸಂದ ಬಿಡಿಸು. ಬಿಂದು ನಿಲುವ ಅಂದವ ಹೇಳು, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.