Index   ವಚನ - 96    Search  
 
ಅಕಾಯದ ಕಣ್ಣಿನಲ್ಲಿ ನೋಡಿ ವಿಕಾರವಳಿದು ಸುಖಪಟ್ಟಣವ ಕಂಡೆ. ಆ ಪಟ್ಟಣದರಸಿಂಗೆ ಭಾವ ಕಾಲಿಲ್ಲ. ಪ್ರಧಾನಂಗೆ ಪಾರುಪತ್ಯಕ್ಕೆ ನುಡಿವಡೆ ಬಾಯಿಲ್ಲ. ತಳವಾರ ತಿರುಗುವುದಕ್ಕೆ ಕಣ್ಣಿಲ್ಲ. ಆ ಪಟ್ಟಣದಲ್ಲಿ ಮೂವರಿಗೆ ಕರ್ತನೊಬ್ಬ ಅರಸು. ಆ ಅರಸ ಕಣ್ಣಿನಲ್ಲಿ ಕಾಣಲಿಲ್ಲ, ಎಲ್ಲಿದ್ದಹರೆಂದು ಕೇಳಲಿಲ್ಲ. ಇದ್ದ ಠಾವಿಂಗೆ ಒಬ್ಬರೂ ಹೊದ್ದಲಿಲ್ಲ. ಅರಸಿನ ಆಜ್ಞೆ, ಬಲುಹ, ಓಲಗಕ್ಕೆ ತೆರಪಿಲ್ಲ. ಜೀವಿತಕ್ಕೆ ಅಡಹಿಲ್ಲ, ಎನ್ನ ಬಡತನವ ಇನ್ನಾರಿಗೆ ಹೇಳುವೆ? ಬಂಟರು ಸತ್ತರು, ಅರಸು ನಷ್ಟವಾದ. ಆ ಉಭಯದ ಬೇಧವ ನಾನರಿಯೆ, ನೀ ಹೇಳು. ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.