ರಾಜ್ಯ ಹೋದಲ್ಲಿ ರಾಯತನ ಉಂಟೆ?
ಪೂಜೆ ಅಡಗಿದಲ್ಲಿ ಪುಣ್ಯದ ಹಂಗುಂಟೆ?
ಮಾಟಕೂಟ ನಷ್ಟವಾದಲ್ಲಿ
ಮಹಾಮನೆಯ ಎಡೆಯಾಟವುಂಟೆ?
ಸಟ್ಟೆಯನೊಪ್ಪಿಸಿದವಂಗೆ ಮತ್ತೆ ಒಪ್ಪದ ಚೀಟುಂಟೆ?
ಭಕ್ತನಾಗಿ ಮಾಡಿ ಕಂಡೆ, ಭೃತ್ಯನಾಗಿ ಕಾಯಿದು ಕಂಡೆ
ಮತ್ತೆ ನೀ ನೀವೊಪ್ಪಿ ಕೊಟ್ಟಿರಿ.
ಎನ್ನಂಗದಲ್ಲಿ ಮರ್ತ್ಯರೂಪನ ರೂಪ
ನಿಮಗೆ ಒಪ್ಪಿಸಿದೆಯೆಂಬುದಕ್ಕೆ
ಮೊದಲೇ ಬಚ್ಚಬಯಲಾಯಿತ್ತು.
ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.