Index   ವಚನ - 2    Search  
 
ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ. ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ. ಮನಸುಳ್ಳವರು ನೀವು ಪುಣ್ಯಗೈದಿರವ್ವಾ ಮಹಾಲಿಂಗ ಗಜೇಶ್ವರನನಗಲಿದಡೆ ನಿದ್ರೆಯೆಮಗಿಲ್ಲ, ಕನಸಿನ್ನೆಲ್ಲಿ ಬಹುದವ್ವಾ.