Index   ವಚನ - 20    Search  
 
ಎನ್ನ ಕಡೆಗಣ್ಣು ಕೆಂಪಾಯಿತವ್ವಾ. ಎನ್ನ ನಳಿತೋಳು ಉಡುಗಿದವವ್ವಾ. ಇಕ್ಕಿದ ಹವಳದ ಸರ ಬೆಳುಹಾದವವ್ವಾ. ಮುಕ್ತಾಫಳ ಹಾರದಿಂದ ಆನು ಬೆಂದೆನವ್ವಾ. ಇಂದೆನ್ನ ಮಹಾಲಿಂಗ ಗಜೇಶ್ವರನು ಬಹಿರಂಗವನೊಲ್ಲದೆ ಅಂತರಂಗದಲಿ ನೆರೆದ ಕಾಣೆ ಅವ್ವಾ!