ಭಕ್ತರು ದ್ರವ್ಯವ ಗಳಿಸಿದಲ್ಲಿ
ತಮ್ಮ ತನುವಿದ್ದಲ್ಲಿಯೆ
ಗುರು ಲಿಂಗ ಜಂಗಮಕ್ಕರ್ಪಿಸುವುದು.
ಇದೇ ಸದ್ಭಕ್ತಿಯ ಹೊಲಬು.
ತಾನಳಿದು ಮತ್ತೆ ಮನೆಮಕ್ಕಳಿಗೆಂದಡೆ
ಅದೆ ಆಚಾರಕ್ಕೆ ಭಂಗ.
ಆತ ಸ್ವಾಮಿಗೆ ಸ್ವಾಮಿದ್ರೋಹಿ.
ಇದನರಿದು ಕಲ್ಯಾಣದ ತ್ರಿಪುರಾಂತಕ ಲಿಂಗದಲ್ಲಿ
ಗಾವುದಿ ಮಾಚಯ್ಯ ಹೇಳಿದುದ
ಕೇಳಿ ಎಲ್ಲರೂ ಸತ್ಯವೆನ್ನಿರಣ್ಣಾ.