Index   ವಚನ - 44    Search  
 
ಕೋಣೆಯ ಕೋಹಿನಲ್ಲಿ ಮೂರು ಬಾಗಿಲುಂಟೆಂಬರು ಯೋಗಿಗಳು. ಅವು ದ್ವಾರಗಳಲ್ಲದೆ ಬಾಗಿಲ ನಾವರಿಯೆವು. ಪ್ರದಕ್ಷಿಣದ ಒಳಗಾದ ಬಾಗಿಲು ಮುಚ್ಚಿದಲ್ಲಿ ಸಿಕ್ಕಿದ ದ್ವಾರಂಗಳಿಗೆ ಕುರುಹಿಲ್ಲ. ಊರ್ಧ್ವನಾಮ ಯೋಗ ಸಂಬಂಧವಾದ ಒಂದು ಬಾಗಿಲ ಕಟ್ಟಿ ಒಂಬತ್ತ ಮುಚ್ಚಿದ ಸಂದಿಗಳೆಲ್ಲವು ಅದರೊಳಗೆ ಸಲೆಸಂದ ಮತ್ತೆ ಹೋಹುದೊಂದೆ ಬಾಗಿಲು ನಾರಾಯಣಪ್ರಿಯ ರಾಮನಾಥಾ.