Index   ವಚನ - 61    Search  
 
ನಾಯ ನರಿಯ ಮಧ್ಯದಲ್ಲಿ ನಾರಿವಾಳದ ಸಸಿ ಹುಟ್ಟಿತ್ತು. ಐದು ಗೇಣು ಉದ್ದ ಎಂಟು ಗೇಣು ವಿಸ್ತೀರ್ಣ. ಅದರ ಬೇರು ಪಾತಾಳಕ್ಕೆ ಇಳಿಯಿತ್ತು; ಬೇರಿನ ಮೊನೆ ನೀರ ತಿಂದಿತ್ತು; ನೀರ ಸಾರ ತಾಗಿ ಮರನೊಡೆಯಿತ್ತು, ಮಟ್ಟೆ ಇಪ್ಪತ್ತೈದಾಗಿ ಹೊಂಬಾಳೆ ಬಿಟ್ಟಿತ್ತು; ಹದಿನಾರು ವಳಯದಲ್ಲಿ ಕಾಯಿ ಬಲಿದವು. ಮೂರು ದಿಸೆಯಲ್ಲಿ ಆ ಮರವ ಹತ್ತಿ ಕಾಯ ಕೆಡಹುವರಿಲ್ಲ. ವಾಯವಾಯಿತ್ತು ಮರ ಹುಟ್ಟಿ ಮರದ ಕೆಳಗಿದ್ದು ಹಣ್ಣಿನ ಹಂಬಲು ಹರಿವುದ ನೋಡುತ್ತಿದ್ದೇನೆ. ನಾರಾಯಣಪ್ರಿಯ ರಾಮನಾಥಾ.