Index   ವಚನ - 81    Search  
 
ಮರುಳನ ಊಟದಂತೆ, ಮಯೂರನ ನಿದ್ರೆಯಂತೆ, ಮಾರ್ತಾಂಡನ ಕಿರಣದಂತೆ, ಸ್ಫಟಿಕದ ಘಟದಂತೆ, ಕಟಕದಲ್ಲಿ ತೋರುವ ಆಸಿಯ ರಸೆಯಂತೆ, ಹೊದ್ದಿಯೂ ಹೊದ್ದದಂತೆ, ಇದ್ದೂ ಇಲ್ಲದಂತೆ, ಕಂಡೂ ಕಾಣದಂತೆ, ಕೇಳಿಯೂ ಕೇಳದಂತೆ, ಇಪ್ಪ ಸುಳಿವ ಜಂಗಮಮೂರ್ತಿಯ ಕಂಡು ನಮೋ ನಮೋ ಎಂಬೆ ನಾರಾಯಣಪ್ರಿಯ ರಾಮನಾಥಾ.