Index   ವಚನ - 82    Search  
 
ಮಾತಿನಲ್ಲಿ ಬಲೋತ್ತರವಂತರೆಲ್ಲರೂ ಆತನನರಿದುದಿಲ್ಲ ಆತ ಏತರೊಳಗೂ ಸಿಕ್ಕದ ಅಜಾತ ಶಂಭು. ಆತನ ನೀತಿಯನರಿವುದಕ್ಕೆ ಅಸುರ ಕರ್ಮವ ಬಿಟ್ಟು ವೇಷದಿಂದಾದ ಘಾತಕತನವನೊಲ್ಲದೆ ಭಕ್ತಿಯೆಂಬ ಆಶೆ ಕುರಿತು ಪೋಷಣವ ಹೊರೆಯದೆ ನಿಜ ತತ್ವದ ಆಶೆಯೇ ಸಾಕಾರವಾಗಿ ಅರಿದ ಆತ್ಮ ಕರಿಗೊಂಡಲ್ಲಿ ಹರಿಪ್ರಿಯ ಅಘೋರನಾಶನ ರಾಮನಾಥಾ.