Index   ವಚನ - 39    Search  
 
ಏನೆಂದೂ ಎನಲಿಲ್ಲ; ನುಡಿದು ಹೇಳಲಿಕ್ಕಿಲ್ಲ. ನಿಜದಲ್ಲಿ ನಿಂದ ಬೆರಗ ಕುರುಹ ಹರಿವುದೆ ಮರುಳೆ? ಹರಿದು ಹತ್ತುವುದೆ ಮರುಳೆ ಬಯಲು? ಅದು ತನ್ನಲ್ಲಿ ತಾನಾದ ಬಯಲು; ತಾನಾದ ಘನವು. ಇನ್ನೇನನರಸಲಿಲ್ಲ. ಆದು ಮುನ್ನವೆ ತಾನಿಲ್ಲ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.