Index   ವಚನ - 54    Search  
 
ಕಾಳು ದೇಹದೊಳಗೊಂದು ಕೀಳು ಜೀವ ಹುಟ್ಟಿತ್ತಾಗಿ ಆಪ್ಯಾಯನವಡಗದು, ಸಂದೇಹ ಹಿಂಗದು ಇದೇನೊ ಇದೇನೋ! ಹಂದೆಗಳ ಮುಂದೆ ಬಂದು ಕಾಡುತಲಿದ್ದುದೆ ಇದೇನೊ ಇದೇನೋ! ಕಾಲಾಳು ಮೇಲಾಳುಗಳು ಬೇಳುವೆಗೊಳಗಾದರು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂಬರು.