Index   ವಚನ - 83    Search  
 
ನಾಮಾನಾಮವೆಂದು ನೀನು ನಾಮಕ್ಕೆ ಬಳಲುವೆ. ನಾಮವಾವ ಸೀಮೆಯೊಳಗಿಪ್ಪುದು ಹೇಳೆಲೆ ಮರುಳೆ? ನಾಮವೂ ಇಲ್ಲ ಸೀಮೆಯೂ ಇಲ್ಲ, ಒಡಲೂ ಇಲ್ಲ ನೆಳಲೂ ಇಲ್ಲ, ನಾನೂ ಇಲ್ಲ ನೀನೂ ಇಲ್ಲ ಏನೂ ಇಲ್ಲ, ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದುದಾಗಿ.