Index   ವಚನ - 147    Search  
 
ಹೊರಗಣ ಮಲತ್ರಯಕ್ಕೆ ಒಳಗಣ ಅರಿವ ನೀಗಾಡಲೇತಕ್ಕೆ? ಅಲ್ಪ ಸುಖಕ್ಕೆ ಮಚ್ಚಿ ಕುಕ್ಕುರನಂತೆ ಸಿಕ್ಕಿ ಸಾಯಲೇತಕ್ಕೆ? ನಿಶ್ಚಯವಾಗಿ ತಾ ಬಂದ ಆದಿ ಅನಾದಿಯೆಂಬ ವಸ್ತುವ ತಿಳಿದು ನೋಡಿ ಚಿಕ್ಕಯ್ಯಪ್ರಿಯ ಸಿದ್ಧಲಿಂಗವನರಿಯಬಲ್ಲಡೆ ಇಲ್ಲ ಇಲ್ಲ ಎಂದೆ.