Index   ವಚನ - 49    Search  
 
ಘನಗಂಭೀರ ಮಹಾ ವಾರಿಧಿಯಲ್ಲಿ ಫೇನ ತರಂಗ ಬುದ್ಬುದಂಗಳಾದವಲ್ಲದೆ ಬೇರಾಗಬಲ್ಲವೆ? ಆತ್ಮನೆಂಬ ಅಂಬುಧಿಯಲ್ಲಿ ಸಕಲ ಬ್ರಹ್ಮಾಂಡಕೋಟಿಗಳಾದವಲ್ಲದೆ ಬೇರಾಗಬಲ್ಲವೆ? ಇದ ಬೇರೆಂಬ ಅರೆಮರುಳುಗಳ ನಾನೇನೆಂಬೆ? ವಿಶ್ವವನರಿದು ನೋಡಲು ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗ ಬೇರಿಲ್ಲ.