ವಚನ - 57     
 
ಎಣ್ಣೆ ಬತ್ತಿ ಪ್ರಣತೆ ಕೂಡಿ ಜ್ಯೋತಿಯ ಬೆಳಗಯ್ಯಾ. ಅಸ್ಥಿ ಮಾಂಸ ದೇಹ ಪ್ರಾಣ ನಿಃಪ್ರಾಣವಾಯಿತ್ತು. ದೃಷ್ಟಿ ಪರಿದು ಮನಮುಟ್ಟಿದ ಪರಿಯೆಂತೊ? ಮುಟ್ಟಿ ಲಿಂಗವ ಕೊಂಡಡೆ, ಕೆಟ್ಟಿತ್ತು ಜ್ಯೋತಿಯ ಬೆಳಗು! ಇದು ಕಷ್ಟವೆಂದರಿದೆನು ಗುಹೇಶ್ವರಾ.