Index   ವಚನ - 577    Search  
 
ಬೆಲ್ಲದ ಪುತ್ಥಳಿಯ ಕೈಯಲ್ಲಿ ಹಿಡಿದು ಎಲ್ಲಿ ಚುಂಬಿಸಿದಡೂ ಇನಿದಹುದು. ಒಳ್ಳಿಹ ಬೇವಿನ ಹಣ್ಣ ಮೆಲ್ಲನೆ ಚುಂಬಿಸಿದಡೆ ಇನಿದಹುದೆ? ಎಲ್ಲ ವಿದ್ಯೆಯನೂ ಬಲ್ಲೆವೆಂದೆಂಬರು, ಅವರು ಸಲ್ಲದೆ ಹೋದರಯ್ಯಾ ಗುಹೇಶ್ವರಾ.