Index   ವಚನ - 20    Search  
 
ಆಸೆ ಪರಿಣಾಮಕ್ಕೆ ಬೇಸತ್ತು ಹೋಯಿತ್ತು. ಆಶ್ರಯದ ನಿದ್ರೆ ಕೆಟ್ಟಿತ್ತು. ಗ್ರಾಸ ಮೆಲ್ಲನಾಯಿತ್ತು. ಸ್ತ್ರೀಯರ ಮೇಲಣ ಇಚ್ಛೆ ಕೆಟ್ಟಿತ್ತು. ಈಶ್ವರ! ನಿಮ್ಮ ಪಾದಾಂಬುಜ ಸೇವೆಯಿಂದ ಕಾಣಾ! ರಾಮನಾಥ.