Index   ವಚನ - 27    Search  
 
ಈಶ! ನಿಮ್ಮ ಪೂಜಿಸಿದ ಬಳಿಕ ಅನ್ಯ ದೈವಂಗಳಿಗೆ ಹೇಸಲೇ ಬೇಕು. ಹೇಸದೆ ಅನ್ಯದೈವಕ್ಕೆ ಆಸೆ ಮಾಡಿದಡೆ ಅವ ನಮ್ಮ ಈಶ್ವರಂಗೆ ಹೊರಗು. ದೋಷರಹಿತ ಭಕ್ತರು ಅವಂಗೆ ಕುಲವೆಂದು ಕೂಸ ಕೊಟ್ಟು ಕೂಡುಂಡಡೆ ಮೀಸಲ ಬೋನವ ನಾಯಿ ಮುಟ್ಟಿದಂತೆ ಕಾಣಾ! ರಾಮನಾಥ.