Index   ವಚನ - 80    Search  
 
ಗುರು ಲಿಂಗ ಒಂದೆಂಬರು. ಗುರು ಲಿಂಗ ಒಂದಾದ ಠಾವ ತಿಳಿದು ನೋಡಿರೆ. ಗುರು ಕಾರುಣ್ಯವಾದ ಬಳಿಕ ಅಂಗದ ಮೇಲೆ ಲಿಂಗವಿರಬೇಕು. ಲಿಂಗವಿಲ್ಲದ ಗುರುಕಾರುಣ್ಯವು ಬತ್ತಿದ ಕೆರೆಯಲ್ಲಿ ತಾವರೆಯ ಬಿತ್ತಿದಂತೆ ಕಾಣಾ! ರಾಮನಾಥ.