Index   ವಚನ - 109    Search  
 
ನೆರೆ ನಂಬಿ ಕರೆದಡೆ ನರಿ ಕುದುರೆಯಾಗಿ ಹರಿಯವೆ? ಜಗವೆಲ್ಲಾ ಅರಿಯಲು ತೊರೆಯೊಳಗೆ ಬಿದ್ದ ಲಿಂಗ ಕರೆದಡೆ ಬಂದುದು ಕರಸ್ಥಲಕ್ಕೆ. ನಂಬದೆ ಕರೆದವರ ಹಂಬಲನೊಲ್ಲನೆಮ್ಮ ರಾಮನಾಥ.