Index   ವಚನ - 118    Search  
 
ಭಕ್ತನ ಮಠವೆಂದು ಭಕ್ತ ಹೋದಡೆ ಆ ಭಕ್ತ ಭಕ್ತಂಗೆ ಅಡಿಯಿಟ್ಟು ಇದಿರೆದ್ದು ನಡೆದು ಹೊಡೆಗೆಡೆದು ಒಡಗೊಂಡು ಬಂದು ವಿಭೂತಿ ವೀಳ್ಯವನ್ನಿಕ್ಕಿ ಪಾದಾರ್ಚನೆಯಂ ಮಾಡಿಸಿ ಒಕ್ಕುದ ಕೊಂಡು ಓಲಾಡುತ್ತಿಪ್ಪುದೆ ಭಕ್ತಿ. ಹೀಂಗಲ್ಲದೆ ಬೆಬ್ಬನೆ ಬೆರತು, ಬಿಬ್ಬನೆ ಬೀಗಿ ಅಹಂಕಾರಭರಿತನಾಗಿಪ್ಪವನ ಮನೆಯ ಲಿಂಗಸನುಮತರು ಹೊಗರು ಕಾಣಾ! ರಾಮನಾಥ.