Index   ವಚನ - 131    Search  
 
ಮರನೊಳಗಣ ಮಂದಾಗ್ನಿಯ ಉರಿಯದಂತಿರಿಸಿದೆ ನೊರೆವಾಲೊಳಗೆ ತುಪ್ಪವ ಕಂಪಿಲ್ಲದಂತಿರಿಸಿದೆ ಶರೀರದೊಳಗಾತ್ಮನನಾರು ಕಾಣದಂತಿರಿಸಿದೆ ನೀ ಬೆರಸುವ ಭೇದಕ್ಕೆ ಬೆರಗಾದೆನಯ್ಯ! ರಾಮನಾಥ.