Index   ವಚನ - 136    Search  
 
ಮೊಲೆ ಮುಡಿ ಬಂದಡೆ ಹೆಣ್ಣೆಂಬರು. ಗಡ್ಡ ಮೀಸೆ ಬಂದಡೆ ಗಂಡೆಂಬರು. ನಡುವೆ ಸುಳಿವ ಆತ್ಮನು ಹೆಣ್ಣೂ ಅಲ್ಲ ಗಂಡೂ ಅಲ್ಲ ಕಾಣಾ! ರಾಮನಾಥ.