Index   ವಚನ - 162    Search  
 
ಹರ ತನ್ನ ಭಕ್ತರ ತಿರಿವಂತೆ ಮಾಡುವ ಒರೆದು ನೋಡುವ ಮಿಸುನಿಯ ಚಿನ್ನದಂತೆ. ಅರೆದು ನೋಡುವ ಚಂದನದಂತೆ. ಅರಿದು ನೋಡುವ ಕಬ್ಬಿನ ಕೋಲಿನಂತೆ. ಬೆದರದೆ ಬೆಚ್ಚದೆ ಇರ್ದಡೆ ಕರವಿಡಿದೆತ್ತಿಕೊಂಬ, ನಮ್ಮ ರಾಮನಾಥನು.