Index   ವಚನ - 17    Search  
 
ಈಶ್ವರನು ಅಲಂಕೃತರೂಪಾಗಿ ಜಗವ ತಾಳಿ ಬಂದಲ್ಲಿ ಮಾಯೆಯೆಂಬ ಶಕ್ತಿ ಜ್ಯೋತಿ ಕಾಣದ ಮರೆಯಲ್ಲಿ ತಮವಡಗಿಪ್ಪ ಭೇದದಂತೆ. ಚಿತ್ತಶುದ್ಧವಿಲ್ಲದವರ ಕರ್ತೃ ಭೃತ್ಯ ಸಂಬಂಧ ಉಭಯಕ್ಕೂ ಸರಿ. ಅರಿದು ಮಾಡುವಲ್ಲಿ ಅವನ ಅನುವನರಿದು ಮಾಡಿಸಿಕೊಂಬಲ್ಲಿ ಲಾಗಿನ ಪಶುವಿನಂತೆ ಉಭಯಗುಣ ಭೇದ. ಉಭಯಸ್ಥಲ ನಿರತ ಕಾಲಾಂತಕ ಭೀಮೇಶ್ವರಲಿಂಗವು ತಾನೆ.