Index   ವಚನ - 596    Search  
 
ಇದ್ದುದ ಹೇಳಲಿಲ್ಲ, ಇದ್ದುದ ತೋರಲಿಲ್ಲ, ಹೊದ್ದಿದ ಆಶ್ರಮವ ನಾನೇನೆಂಬೆನು ಶಿವನೆ? ಭದ್ರಕಾಳಿಯ ಬಸಿರೊಳಗಿರ್ದ ಬಾವಿಯ ಸರ್ಪನು, ಸಿದ್ಧರಸದ ಘುಟಿಕೆಯ ನುಂಗಿ ಎದ್ದು ಆಡಿತ್ತು ನೋಡಾ! ಹದ್ದಿನ ಹೆಡೆಯಲ್ಲಿ ಮಾಣಿಕವಿದ್ದುದು ಇಲ್ಲೆಂಬ ಎದ್ದು ಹೇಳುವ ಕನಸು ತಾನಿಲ್ಲ ಗುಹೇಶ್ವರ.