Index   ವಚನ - 27    Search  
 
ಕಾಯವೆಂಬ ಢಕ್ಕೆಯ ಮೇಲೆ ಜೀವವೆಂಬ ಹೊಡೆಚೆಂಡು ಬೀಳೆ ತ್ರಿವಿಧವ ತಾ ತಾಯೆಂಬ ಆಸೆ ಹಿಂಡಿ ಡಿಂಡಿಯೆನುತ್ತಿದೆ. ಇಂತೀ ಉಲುಹಿನ ಭೇದದಲ್ಲಿ ಹೊಲಬುದಪ್ಪದೆ ಗೆಲಬೇಕು ಕಾಲವೆಂಬ ಮಾರಿಯ, ಕಾಲಾಂತಕ ಭೀಮೇಶ್ವರಲಿಂಗವನರಿಯಬಲ್ಲಡೆ.