Index   ವಚನ - 71    Search  
 
ಮಾಯಾಗುಣ ರೂಪಾದಲ್ಲಿ ಮಲಕ್ಕೊಡಲಾಯಿತ್ತು ಮಲಸ್ಥರೂಪವಾಗಿ ನಿಂದಲ್ಲಿ ಬಲವಂತರೆಲ್ಲರು ಮಲದ ಬೆಂಬಳಿಯಲ್ಲಿ ಮರುಳಾದರು. ಮರುಳಾಟದಲ್ಲಿ ಮಾರಿ ಒಲವರವಾಗಿ ಮನ ಶುದ್ಧವಿಲ್ಲದವರ ಮನೆ ಮನೆಯಲ್ಲಿ ತನುವಿಕಾರವನಾಡಿಸುತ್ತೈದಾಳೆ. ಮಾರಿಯ ಮುರಿದು ದಾರಾವತಿಯ ಕೆಡಿಸಿ ಕೈಯ ಢಕ್ಕೆಯ ಗತಿಯ ಹಿಂಗಿ ಮಾಯೆಯ ಬಾಗಿಲ ಭ್ರಾಂತಿಯ ಬಿಟ್ಟಲ್ಲಿ ಕಾಲಾಂತಕ ಭೀಮೇಶ್ವರಲಿಂಗವನರಿದುದು.