Index   ವಚನ - 79    Search  
 
ಶರಣಸತಿ ಲಿಂಗಪತಿಯಾದಲ್ಲಿಯೆ ಕಾಯಗುಣ ನಿಂದಿತ್ತು ಆತ್ಮಸತಿ ಅರಿವು ಪುರುಷನಾದಲ್ಲಿಯೇ ಜೀವಗುಣ ನಿಂದಿತ್ತು. ನೀನೆಂಬುದ ಭಾವಿಸಿ ಮಾಡಿದಾಗವೆ ಕಾಯಕ ಶುದ್ಧವಾಯಿತ್ತು. ಕಾಲಾಂತಕ ಭೀಮೇಶ್ವರಲಿಂಗಕ್ಕೆ ಸಲೆ ಸಂದಿತ್ತು.