Index   ವಚನ - 80    Search  
 
ಶಿಲೆ ಭಾವ ಹಿಂಗಿ ಕುರುಹಾಯಿತ್ತು, ಕಾರುಕನ ಕೈಯಲ್ಲಿ, ಪಾಷಾಣ ಭಾವ ಹಿಂಗಿ ಕಳೆಯಾಯಿತ್ತು, ಆಚಾರ್ಯನ ಕೈಯಲ್ಲಿ. ಕಳೆ ನೆಲೆಯಾಯಿತ್ತು, ಪೂಜಿಸುವಾತನ ಚಿತ್ತದಲ್ಲಿ. ಚಿತ್ತ ವಸ್ತುವಿನಲ್ಲಿ ಬೆರೆದು ಕಾಲಾಂತಕ ಭೀಮೇಶ್ವರಲಿಂಗವಾಯಿತ್ತು.