Index   ವಚನ - 85    Search  
 
ಸತಿಯ ಗುಣವ ಪತಿ ನೋಡಬೇಕಲ್ಲದೆ ಪತಿಯ ಗುಣವ ಸತಿ ನೋಡಬಹುದೆ ಎಂಬರು. ಸತಿಯಿಂದ ಬಂದ ಸೋಂಕು ಪತಿಗೆ ಕೇಡಲ್ಲವೆ? ಪತಿಯಿಂದ ಬಂದ ಸೋಂಕು ಸತಿಯ ಕೇಡಲ್ಲವೆ? ಒಂದಂಗದ ಕಣ್ಣು ಉಭಯದಲ್ಲಿ ಒಂದು ಹಿಂಗಲಿಕ್ಕೆ ಭಂಗವಾರಿಗೆಂಬುದ ತಿಳಿದಲ್ಲಿಯೆ ಕಾಲಾಂತಕ ಭೀಮೇಶ್ವರಲಿಂಗಕ್ಕೆ ಸಲೆ ಸಂದಿತ್ತು.