Index   ವಚನ - 89    Search  
 
ಹಲವು ಸಂಸರ್ಗದಿಂದ ಬಂದ ಜಲ ನಿಲವಾಗಿ ಒಂದು ಠಾವಿನಲ್ಲಿ ನದಿ ನಾಮವಾಯಿತ್ತು. ನಾನಾಭಾವಂಗಳಲ್ಲಿ ನೊಂದು ಬಂದ ಜೀವ ಒಂದು ನೆಲೆಯಲ್ಲಿ ನಿಂದು ಸಂದೇಹವ ಬಿಡಲಾಗಿ ಪರಮನಾಯಿತ್ತು. ಪ್ರಕಾಶವ ಕಂಡು ಕಾಲಾಂತಕ ಭೀಮೇಶ್ವರಲಿಂಗವೆಂಬ ನಾಮವಾಯಿತ್ತು.