Index   ವಚನ - 3    Search  
 
ಕಾಯದ ಕಣ್ದೆರೆಯಿಂದುದಯವಾದ ಧಾವತಿ ಎರಡು ನೋಡಯ್ಯಾ: ಮಾಯಾಭ್ರಾಂತಿಯತ್ತಲೊಂದೆಳವುತ್ತಲದೆ ದೇವಾ ನಿಮ್ಮತ್ತಲೊಂದೆಳವುತ್ತಲದೆ. ಒಂದರ ಸಹಜವನೊಂದು ಗೆಲಲರಿಯದು. ಮುಂದೆ ಸತ್ಪಥಕ್ಕೆಂತಡಿಯಿಡುವೆನಯ್ಯಾ ನಾನು? ಕಾಲಚಕ್ರದಲ್ಲಿ ಹುಟ್ಟಿ, ಕರ್ಮಚಕ್ರದಲ್ಲಿ ಬೆಳೆದು ಕಲ್ಪಿತದಿಂದವೆ ದಿನಂಗಳು ಸವೆವುತ್ತವೆಯಯ್ಯಾ. ತಲೆಯೆರಡರ ಪಕ್ಷಿ ವಿಷ ನಿರ್ವಿಷವ ಮೆಲಿದಂತಾಯಿತ್ತೆನಗಯ್ಯಾ. ಅಂದಂದಿನರಿವು ಅಂದಂದಿನ ಮರವೆಗೆ ಸರಿಯಯ್ಯಾ. ತಂದೆ ಈ ದಂದುಗವ ಮಾಣಿಸಿ ನಿಮ್ಮ ನಿಜಾನಂದಭಕ್ತಿಯೆನಗೆ ಕರುಣಿಸಯ್ಯಾ ಅಮರಗುಂಡದ ಮಲ್ಲಿಕಾರ್ಜುನಾ.