Index   ವಚನ - 9    Search  
 
ಸರ್ವಾಂಗಲಿಂಗಿಯಾದ ಶರಣನ ಲಿಂಗ ಭಿನ್ನವಾಗಿ ಹೋಗಲು ಆ ಲಿಂಗದೊಡನೆ ತನ್ನ ಪ್ರಾಣವ ಬಿಡುವದು. ಇದಲ್ಲದೆ ಜೀವಕಾಸೆ ಮಾಡಿ ಪುನಃ ಲಿಂಗವ ಧರಿಸಿದನಾದಡೆ ಶುನಿಯ ಬಸುರಲ್ಲಿ ಬಂದು ಅನೇಕಕಾಲ ನಾಯಕನರಕದಲ್ಲಿರ್ಪನಯ್ಯಾ ನೀ ಸಾಕ್ಷಿಯಾಗಿ ಅಮರಗುಂಡದ ಮಲ್ಲಿಕಾರ್ಜುನಾ.