Index   ವಚನ - 20    Search  
 
ಐಕ್ಯಸ್ಥಲದ ಲೇಪಜ್ಞಾನ ವಿವರ : ಅಪ್ಪು ಆವಾವ ಪಾಕಕ್ಕೂ ತಪ್ಪದೆ ಸಾರವ ಕೊಡುವಂತೆ ತಥ್ಯಮಿಥ್ಯವಾದ ದ್ರವ್ಯಕ್ಕೆ ಹೆಚ್ಚುಕುಂದನರಿಯದಿಪ್ಪಂತೆ ವಾಯು ಸುಗುಣ ದುರ್ಗುಣವೆನ್ನದೆ ತನ್ನಯ ಸಹಜದಿಂದ ಸಂಚರಿಸುವಂತೆ ಅಗ್ನಿಗೆ ಕಾಷ್ಠ ಸರಿಸ ಡೊಂಕೆನ್ನದೆ ಮಲಿನ ಅಮಲಿನವೆನ್ನದೆ ಆವ ದ್ರವ್ಯ ದೃಷ್ಟದಲ್ಲಿ ಸಿಕ್ಕಿದಡೂ ಭೇದಿಸಿ ವೇಧಿಸಿ ಸುಡುವುದಾಗಿ. ಇಂತಿವು ತ್ರಿವಿಧಸ್ಥಲದಂತೆ ಇಪ್ಪುದು ಐಕ್ಯನ ಅರ್ಪಿತ ಸ್ಥಲಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.