Index   ವಚನ - 62    Search  
 
ಭಕ್ತಂಗೆ ಸ್ಪರ್ಶನ ವಿಷಯವಳಿದು ಮಾಹೇಶ್ವರಂಗೆ ಅಪ್ಪು ವಿಷಯವಳಿದು ಪ್ರಸಾದಿಗೆ ರುಚಿ ವಿಷಯವಳಿದು ಪ್ರಾಣಲಿಂಗಿಗೆ ಉಭಯದ ಭೇದ ವಿಷಯವಳಿದು ಶರಣಂಗೆ ಸುಖದುಃಖ ವಂದನೆ ನಿಂದೆ ಅಹಂಕಾರ ಭ್ರಮೆ ವಿಷಯವಳಿದು ಐಕ್ಯಂಗೆ ಇಂತೀ ಐದರ ಭೇದದಲ್ಲಿ ಹಿಂದಣ ಹುಟ್ಟು ಮುಂದಕ್ಕೆ ತಲೆದೋರದೆ ಮುಂದಣ ಹಿಂದಣ ಸಂದೇಹದ ವಿಷಯ ನಿಂದು ಕರ್ಪುರವುಳ್ಳನ್ನಕ್ಕ ಉರಿಯ ಭೇದ ಉರಿವುಳ್ಳನ್ನಕ್ಕ ಕರ್ಪುರದಂಗ. ಉಭಯ ನಿರಿಯಾಣವಾದಲ್ಲಿ ಐಕ್ಯಸ್ಥಲ ನಾಮನಿರ್ಲೇಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.