ವಚನ - 611     
 
ಕದನದೊಳಗಣ ಕಣ್ಣ ಕೆಂಪು, ಕದನದೊಳಗಣ ಮನದ ಕೆಂಪು, ಇದಾವನಾವನ ಕಾಡದಯ್ಯಾ? ಪದುಮದೊಳಗೆ ಬಿಂದು ಸಿಲುಕಿ ಅಲ್ಲಿಯೆ ಅದೆ ನೋಡಿರೆ! ಗುಹೇಶ್ವರನೆಂಬ ಅನುಗ್ರಹ ತನ್ನ ನುಂಗಿ ಲಿಂಗವಿಲ್ಲೆನ್ನುತ್ತಿರ್ದೆನು.