Index   ವಚನ - 72    Search  
 
ರಸ ಗಂಧ ರೂಪು ಶಬ್ದ ಸ್ಪರ್ಶ ಪಂಚೇಂದ್ರಿಯಂಗಳಲ್ಲಿ ಅರ್ಪಿಸುವನ್ನಕ್ಕ ಭಕ್ತ. ರೂಪು ರುಚಿಯ ಕಂಡರ್ಪಿಸುವನ್ನಕ್ಕ ಮಾಹೇಶ್ವರ. ಇಚ್ಫೆಯನರಿತು ಸಾಕು ಬೇಕೆಂಬನ್ನಕ್ಕ ಪ್ರಸಾದಿ. ಕಂಡಲ್ಲಿ ಮುಟ್ಟದೆ ಕಾಣಿಸಿಕೊಂಡು ಮುಟ್ಟಿಹೆನೆಂಬಲ್ಲಿ ಪ್ರಾಣಲಿಂಗಿ. ವಂದನೆ ನಿಂದೆಗೆ ಒಳಗಹನ್ನಕ್ಕ ಶರಣ. ಮುಟ್ಟುವ ತಟ್ಟುವ ತಾಗುವ ಸೋಂಕುವ ಸುಖವನರಿದು ಕೂಡಬೇಕೆಂಬನ್ನಕ್ಕ ಐಕ್ಯ. ಆ ಗುಣ ಪರುಷವ ಸೋಂಕಿದ ಲೋಹದಂತಾದುದು ಷಟ್ ಸ್ಥಲ. ಇಂತೀ ಆರನವಗವಿಸಿ ಬೇರೊಂದು ತೋರದಿಪ್ಪುದು ಐಕ್ಯಸ್ಥಲಲೇಪಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.