ವಚನ - 614     
 
ಪಂಚಭೂತಸಂಗದಿಂದ ಜ್ಯೋತಿಯಾಯಿತ್ತು. ಪಂಚಭೂತಸಂಗದಿಂದ ಕರ್ಪುರವಾಯಿತ್ತು. ಈ ಎರಡರ ಸಂಗವೇನಾಯಿತ್ತು ಹೇಳಾ ವಾಙ್ಮನಾತೀತ ಗುಹೇಶ್ವರಾ?