ವಚನ - 615     
 
ಎರಡೆಂಬರಯ್ಯಾ ಕರಣದ ಕಂಗಳಲ್ಲಿ ನೋಡಿದವರು. ಎರಡುವನತಿಗಳೆದು ಒಂದೆಂಬರಯ್ಯಾ. ಒಂದೂ ಇಲ್ಲದ ನಿರಾಳವ ಕಾಮಿಸೂದಿಲ್ಲಾಗಿ ಕಲ್ಪಿಸೂದಿಲ್ಲ. ಭಾವಿಸೂದಿಲ್ಲಾಗಿ ಬಯಸೂದಿಲ್ಲ. ಗುಹೇಶ್ವರನೆಂಬುದಿಲ್ಲಾಗಿ ಮುಂದೆ ಬಯಲೆಂಬುದೂ ಇಲ್ಲ.