Index   ವಚನ - 7    Search  
 
ಧೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ. ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ ಮಹಾಕುಂಭಘೃತಂಗಳ ಕೊಂಡಂತೆ. ಮಹಾಮೇರುವೆಯ ಅಲ್ಪಮೊರಡಿ ಧಿಕ್ಕರಿಸಿ ಅಲ್ಲಿಗೆ ಹೋದಡೆ ಅದರ ತಪ್ಪಲಲ್ಲಿಯೆ ತಾನಡಗಿದಂತೆ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.