Index   ವಚನ - 5    Search  
 
ಅಲ್ಲಿಯ ಬಹುರೂಪ ಇಲ್ಲಿಗೆ ಬಂದಿತ್ತು. ಇಲ್ಲಿಯ ಬಹುರೂಪ ಎಲ್ಲಿ ಅಡಗಿತ್ತೋ? ಎನ್ನ ಬಹುರೂಪ ಬಲ್ಲವರಾರೋ? ನಾದ ಹರಿದು ಸ್ವರವು ಸೂಸಿದ ಬಳಿಕ ಈ ಬಹುರೂಪ ಬಲ್ಲವರಾರೋ? ರೇಕಣ್ಣಪ್ರಿಯ ನಾಗಿನಾಥನಲ್ಲಿ ಬಸವಣ್ಣನಿಂದ ಬದುಕಿತೀ ಲೋಕವೆಲ್ಲ.