Index   ವಚನ - 618    Search  
 
ಅಂಗದ ಧರೆಯ ಮೇಲೆ ಮೂರು ಬಾವಿಯುಂಟು: ಮೊದಲ ಬಾವಿಯ ಮುಟ್ಟಿದಾತ ಅಂಗಸಂಗಿಯಾದನು. ನಡುವಣ ಬಾವಿಯ ಮುಟ್ಟಿದಾತ ಉತ್ಪತ್ಯ-ಸ್ಥಿತಿ-ಲಯಕ್ಕೊಳಗಾದನು. ಮೇಲಣ ಬಾವಿಯ ಮುಟ್ಟಿದಾತ ಜೀವನ್ಮುಕ್ತನಾದನು. ಇವ ತಟ್ಟದೆ ಮುಟ್ಟದೆ ಹೋದರು ನೋಡಾ, ಪರಬ್ರಹ್ಮವ ದಾಂಟಿ, ಗುಹೇಶ್ವರಲಿಂಗದಲ್ಲಿ ಹಂಗು ಹರಿದ ಶರಣರು.