ಆಶೆಯರತ ಬಾಚಿಯಲ್ಲಿ ಭವಪಾಶವಿಲ್ಲದ ಜಂಗಮಕೆ ತೆತ್ತ.
ರೋಷವಿಲ್ಲದ ಉಳಿಯಲ್ಲಿ ನಿಜವಾಸವ ನೋಡಿ ಹುಗಿಲುದೆಗೆವುತ್ತ
ಭಾಷೆಗೆ ಊಣಯವಿಲ್ಲದ ಸದ್ಭಕ್ತರ ಆಶ್ರಯಕ್ಕೆ
ನಿಜವಾಸವ ಮಾಡುವ ಕಾಯಕ.
ಈ ಗುಣ ಬಾಚಿಯ ಬಸವಣ್ಣನ ನೇಮ.
ಇದು ಸಂಗನಬಸವಣ್ಣ ಕೊಟ್ಟ ಕಾಯಕದಂಗ,
ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ
ಕಾಳಿಕಾವಿಮಲ ರಾಜೇಶ್ವರಲಿಂಗವನರಿವುದಕ್ಕೆ.