Index   ವಚನ - 6    Search  
 
ಗುರುವಾಗಿ ಬಂದರಯ್ಯಾ ರೇವಣಸಿದ್ಧೇಶ್ವರದೇವರು. ಲಿಂಗದಲ್ಲಿ ನಿಬ್ಬೆರಗಾದರಯ್ಯಾ ಅನುಮಿಷದೇವರು. ಜಂಗಮವಾಗಿ ಸುಳಿದರಯ್ಯಾ ಪ್ರಭುದೇವರು. ಪ್ರಸಾದವ ಕೊಂಡು ಪಥವ ತೋರಿದರಯ್ಯಾ ಬಿಬ್ಬಿಬಾಚಯ್ಯಗಳು. ಲಿಂಗದಲ್ಲಿ ನಿರ್ವಯಲಾದರಯ್ಯಾ ನೀಲಲೋಚನೆಯಮ್ಮನವರು. ಸೌರಾಷ್ಟ್ರಮಂಡಲದಲ್ಲಿ ಮೆರೆದರಯ್ಯಾ ಓಹಿಲದೇವರು. ಇಂತಿವರ ಒಕ್ಕುಮಿಕ್ಕ ಬಯಲಪ್ರಸಾದ ಕೊಂಡು ಬದುಕಿದೆನಯ್ಯಾ, ವೀರಶೂರ ರಾಮೇಶ್ವರಾ.