Index   ವಚನ - 7    Search  
 
ಮಾಂಸದೊಳಗಿದ್ದ ಕ್ಷೀರವ, ಕ್ಷೀರದೊಳಗಿದ್ದ ಬೆಸುಗೆಯ ಬಿನ್ನಾಣದಿಂದ ತೆಗೆದ ಬೆಣ್ಣೆಯ, ಆರೈದು ನೋಡಿ, ಕರಗಿ ಕಡೆಯಲ್ಲಿ ಮೀರಿ ಘೃತವಾದುದು ಪಶುವೋ, ಪಯವೋ, ದಧಿಯೋ? ನವನೀತವೋ ? ಘೃತಸ್ವಯವೋ ? ಅಲ್ಲ ಬೆಸುಗೆಯ ಎಸಕವೋ ? ಇಂತೀ ಗುಣವೊಂದರಿಂದೊಂದೊಂದ ಕಂಡು ಕಾಣಿಸಿಕೊಂಬ ಮನೋನಾಥನ ಅನುವ ವಿಚಾರಿಸಿ ಮನ ಮನನೀಯ ಭಾವ ಭಾವನೆ ಧ್ಯಾನ ಪ್ರಮಾಣು ಪೂಜೆ ವಿಶ್ವಾಸ ಇವನರಿದುದು ಅರಿಕೆ. ಇಂತಿವನೆಲ್ಲವನೂ ತೆರದರ್ಶನದಿಂದರಿದು ಬಿಟ್ಟುದ ಮುಟ್ಟದೆ, ಮುಟ್ಟಿದುದ ಮುಟ್ಟಿ ತನ್ನಷ್ಟ ಉಭಯಭ್ರಾಂತು ಹುಟ್ಟುಗೆಟ್ಟಲ್ಲಿ ಕಮಠೇಶ್ವರಲಿಂಗವು ತಾನಾದ ಶರಣ.