ವಚನ - 635     
 
ಅರಿದು ನೆನೆಯಲಿಲ್ಲ, ಮರೆದು ಪೂಜಿಸಲಿಲ್ಲ. ತೆರಹಿಲ್ಲದ ಘನಕ್ಕೆ ಕುರುಹು ಮುನ್ನಿಲ್ಲ. ತನಗೆ ಗುರುವಿಲ್ಲ, ಗುರುವಿಗೆ ತಾನಿಲ್ಲ ಗುರುವಿಗೆ ಶಿಷ್ಯನು ಹೊಡವಡುವ ಕಾರಣ ಮುನ್ನಿಲ್ಲ. ಬಯಲ ಬಿತ್ತಲಿಲ್ಲ, ಬೆಳೆಯಲಿಲ್ಲ, ಒಕ್ಕಲಿಲ್ಲ, ತೂರಲಿಲ್ಲ, ಗುಹೇಶ್ವರನೆಂಬ ಲಿಂಗಕ್ಕೆ ಕುರುಹು ಮುನ್ನಿಲ್ಲ!